ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ವಲಯ, ಜನ ಜಾಗೃತಿ ವೇದಿಕೆ ವಿಟ್ಲ ವಲಯ ಮತ್ತು ಸಾಹಿತ್ಯ ಸಂಘ ವಿಠಲ ಪ್ರೌಢ ಶಾಲೆ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ `ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ವಿಠಲ ಪ್ರೌಢ ಶಾಲೆಯಲ್ಲಿ ಜರಗಿತು. ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಕಾರ್ಯಕ್ರವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು.
swasthya (1)

swasthya (2)ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಆರೋಗ್ಯ ಇಲಾಖೆಯ ಹಿರಿಯ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಮಾಹಿತಿ ನೀಡಿ, ನಮ್ಮ ಆರೋಗ್ಯ ನಮ್ಮ ಕೈಯ್ಯಲ್ಲಿಯೇ ಇದೆ. ದುಶ್ಚಟಗಳು ಯಾವರೀತಿ ಅಭ್ಯಾಸವಾಗುತ್ತದೆ, ಅದರ ಪರಿಣಾಮಗಳೇನು, ಅತಿಯಾದ ಮೊಬೈಲ್ ಬಳಕೆ, ಟೀವಿ ವೀಕ್ಷಣೆ, ಮಾದಕ ದ್ರವ್ಯಗಳ ಸೇವನೆಯಿಂದ ಯಾವ ರೀತಿಯ ಕಾಯಿಲೆಗಳು ಬರುತ್ತವೆ, ನಮ್ಮ ಕುಟುಂಬದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ಒಕ್ಕೂಟದ ಸೇವಾ ಪ್ರತಿನಿಧಿ ಪ್ರಕಾಶ್ ಕುಲಾಲ್ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಜನಾರ್ಧನ ಪದ್ಮಶಾಲಿ ಸ್ವಾಗತಿಸಿದರು. ಹಿರಿಯ ಶಿಕ್ಷಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ವಂದಿಸಿದರು. ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *