ಮೂಡುಬಿದರೆ: ಆಳ್ವಾಸ್ ನುಡಿಸಿರಿಯ ಜತೆಗೆ ನ.27ರಂದು ನಡೆಯಲಿರುವ ಆಳ್ವಾಸ್ ವಿದ್ಯಾರ್ಥಿಸಿರಿ ಸಮ್ಮೇಳನಾಧ್ಯಕ್ಷತೆ ಮತ್ತು ಕವಿಗೋಷ್ಠಿಗಳ ಅಧ್ಯಕ್ಷತೆಗೆ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಹಿತ್ಯ, ಕಲೆ, ಭಾಷಣ, ವಿಶೇಷ ಪ್ರತಿಬೆ ಹಾಗೂ ಸಾಂಸ್ಕ್ರತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರದೊಂದಿಗೆ ಅ.10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಳ್ವಾಸ್ ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅ.12ರಂದು ಬೆಳಿಗ್ಗೆ 10ರಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿದ್ಯಾರ್ಥಿಗಳು ಲಿಖಿತ, ಆಶುಭಾಷಣ, ಸಂದರ್ಶನದ ಮೂಲಕ ತಜ್ಞರು ಆಯ್ಕೆ ನಡೆಸಲಿದ್ದು ಡಾ.ಎಂ.ಮೋಹನ ಆಳ್ವ , ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿವರಗಳಿಗೆ ಸಂಚಾರವಾಣಿ 9448911190 ಸಂಪರ್ಕಿಸಬಹುದಾಗಿದೆ.

By suddi9

Leave a Reply

Your email address will not be published. Required fields are marked *