ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯಿತಿನಲ್ಲಿ ಸಸ್ಯ ಸಂರಕ್ಷಣಾ ಯೋಜನೆಯಡಿ ಗುರುವಾರ ನಡೆದ ‘ಕೀಟ ನಾಶಕಗಳ ಬಗ್ಗೆ ರೈತರಿಗೆ ಮಾಹಿತಿ ಶಿಬಿರ’ ಕಾರ್ಯಕ್ರಮದಲ್ಲಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಸುರೇಶ್ ಕೆ.ಆರ್. ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಧ್ಯಕ್ಷ ಸತೀಶ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ರೇವತಿ ಆರ್. ಪೂಜಾರಿ, ಎಪಿಎಂಸಿ ಸದಸ್ಯ ರತ್ನಕುಮಾರ್ ಚೌಟ, ಆತ್ಮ ಯೋಜನೆ ತಾಂತ್ರಿಕ ವ್ಯವಸ್ಥಾಪಕಿ ಪ್ರಿಯಾಂಕ ಎಚ್. ಎನ್., ಕೃಷಿ ಅಧಿಕಾರಿ ಕೆ. ನಾರಾಯಣ ಶೆಟ್ಟಿ, ಸಹಾಯಕ ಕೃಷಿ ಅಧಿಕಾರಿ ಯು..ನಾರಾಯಣ ನಾಯ್ಕ, ಅಶೋಕ ಜೈನ್ ಮತ್ತಿತರರು ಉಪಸ್ಥಿತರಿದ್ದರು.