ಬಂಟ್ವಾಳ: ದೇಶ ವಿದೇಶದಲ್ಲಿ ನಡೆಯುವ ವಿವಿಧ ಘಟನಾವಳಿ ಬಗ್ಗೆ ಸುದ್ದಿ ಮತ್ತು ನಿಖರ ಮಾಹಿತಿ ನೀಡುವುದರ ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಸಂಬಂಧಪಟ್ಟ ಇಲಾಖೆ ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸಿ ನ್ಯಾಯ ದೊರಕಿಸಿ ಕೊಡುವ ಪ್ರಯತ್ನವನ್ನು ವಿವಿಧ ಪತ್ರಿಕೆ ಮತ್ತಿತರ ಮಾಧ್ಯಮಗಳು ನಡೆಸುತ್ತಿದೆ ಎಂದು ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ ಹೇಳಿದ್ದಾರೆ.

7btl-Bolanthur
ತಾಲ್ಲೂಕಿನ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಸಮಾಜದ ಬೆಳವಣಿಗೆಯಲ್ಲಿ ಮಾಧ್ಯಮ ಪಾತ್ರ’ ಬಗ್ಗೆ ಮಾಹಿತಿ ನೀಡಿದರು.
ಸ್ಥಳೀಯ ಏರಮಲೆ ಭದ್ರಕಾಳಿ ದೇವಸ್ಥಾನ ಸಮಿತಿ ಉಪಾಧ್ಯಕ್ಷ ಸಂಜೀವ ಸಪಲ್ಯ ಕೇದಗೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬಾಳ್ತಿಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ವಿಶ್ವೇಶ್ವರ ವಿ.ಕೆ., ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಅಂತರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಫಿಲೋಮಿನಾ ಡಿಸೋಜ ಮತ್ತಿತರರು ಶುಭ ಹಾರೈಸಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಕಿಶೋರ್ ಶೆಟ್ಟಿ, ದೇವದಾಸ್ ನಾಯಿಲ, ಸಾರಿಗೆ ಸಿಬ್ಬಂದಿ ಉಮೇಶ ಪೂಜಾರಿ, ಕಾಲೇಜಿನ ಪ್ರಾಂಶುಪಾಲ ಎ.ಟಿ.ಗಿರೀಶ್ಚಂದ್ರ, ಶಿಬಿರಾಧಿಕಾರಿ ರವಿಚಂದ್ರ ಮಯ್ಯ, ಶಾಲಾ ಮುಖ್ಯಶಿಕ್ಷಕಿ ಚಂದ್ರಾವತಿ ಮತ್ತಿತರರು ಉಪಸ್ಥಿತರಿದ್ದರು.
ಶಿಬಿರ ನಾಯಕ ಸಂತೋಷ್ ಸ್ವಾಗತಿಸಿ, ವಂದಿಸಿದರು. ಶಿಬಿರಾರ್ಥಿ  ನಿತೇಶ್ ಕಾರ್ಯಕ್ರಮ ನಿರೂಪಿಸಿದರು.
–

By suddi9

Leave a Reply

Your email address will not be published. Required fields are marked *