ವಿಟ್ಲ: ತಾಯಿ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ.
ವಿಟ್ಲಮುಡ್ನೂರು ಗ್ರಾಮದ ಮೂಡಾಯಿಮಾರು ನಿವಾಸಿ ನಾರಾಯಣ ಗೌಡ ಅವರ ಪತ್ನಿ ಗೀತಾ (36) ನಾಪತ್ತೆಯಾಗಿರುವಾಕೆ. ಇವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ತಾಯಿ ಮನೆಗೆ ಹೋಗುವುದಾಗಿ ಹೇಳಿದ್ದು, ಅಲ್ಲಿಗೂ ತಲುಪದೆ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದಾರೆಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.