ಮೂಡುಬಿದರೆ:ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಸೋಮವಾರ ನಡೆದ ಮಂಗಳೂರು ಗ್ರಾಮಾಂತರ ಖೋ ಖೋ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.

mbd_nov3_8 (1) mbd_nov3_8 (2)
ಆಳ್ವಾಸ್ ಪದವಿಪೂರ್ವ ಕಾಲೇಜು ತಂಡ ಶ್ರೀ ದುರ್ಗಾಪರಮೇಶ್ವರಿ ಪ.ಪೂ. ಕಾಲೇಜು ಕಟೀಲು ತಂಡವನ್ನು ಅಂತಿಮದ ಪಂದ್ಯದಲ್ಲಿ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ತಂಡ ನಿರಂಜನ ಸ್ವಾಮಿ ಪದವಿಪೂರ್ವ ಕಾಲೇಜು, ಸುಂಕದಕಟ್ಟೆ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ, ದ.ಕ. ಹಾಗೂ ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪಂದ್ಯಾಟ ಹಮ್ಮಿಕೊಳ್ಳಲಾಯಿತು.
.

By suddi9

Leave a Reply

Your email address will not be published. Required fields are marked *