ಬಂಟ್ವಾಳ: ಇಲ್ಲಿನ ತಾ.ಪಂ. ವತಿಯಿಂದ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕ್ರೀಡಾಕೂಟ ನ. 9 ರಂದು ಸೋಮವಾರ ಬಂಟ್ವಾಳದ ಎಸ್ವಿಎಸ್ ದೇವಾಳ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ ತಿಳಿಸಿದರು.
ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸಂಸದ ನಳಿನ್ ಕುಮಾರ್ ಕಟೀಲು ಧ್ವಜಾರೋಹಣ ಮಾಡಲಿದ್ದಾರೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಆರೋಗ್ಯ ಸಚಿವ ಯು.ಟಿ.ಖಾದರ್, ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ, ಶಾಸಕಿ ಶಕುಂತಳ ಶೆಟ್ಟಿ, ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ತಾ.ಪಂ.ಉಪಾಧ್ಯಕ್ಷೆ ವಿಲಾಸಿನಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಜಿ.ಪಂ. ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿ ಶ್ರೀ ವಿದ್ಯಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಗ್ರಾಮಪಂಚಾಯಿತಿಯ ಸದಸ್ಯರು, ತಾಲೂಕುಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗುಮಾಸ್ತರು, ಕಂದಾಯ ಇಲಾಖೆಯ ಗ್ರಾಮ ಮಟ್ಟದ ಅಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ತಾಲೂಕಿನ 9 ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ ಮುಖಂಡತ್ವದಲ್ಲಿ ತಂಡಗಳನ್ನು ರಚಿಕೊಳ್ಳಲಾಗಿದೆ ಎಂದರು.
ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಆಟಗಳು ನಡೆಯಲಿದ್ದು ಓಟದ ಸ್ಪರ್ಧೆ , ಮನೋರಂಜನಾ ಸ್ಪರ್ಧೆ ಹಾಗೂ ಸಾಮಾಥ್ರ್ಯ ಸ್ಪರ್ಧೆಗಳೆಂದು ವಿಂಗಡಿಸಲಾಗಿದೆ. ವೈಯಕ್ತಿಕ ವಿಭಾಗದಲ್ಲಿ ಓಟ, ಗುಂಡು ಎಸೆತ, ಉದ್ದ ಜಿಗಿತ, ರಿಲೇ, ಸಂಗೀತ ಕುರ್ಚಿ , ಪಾಸ್ ಇನ್ ದಿ ಬಾಲ್, ವೇಗದ ನಡಿಗೆ ಮೊದಲಾದ ಆಟಗಳು ನಡೆಯಲಿದೆ. ಗುಂಪು ಸ್ಪರ್ಧೆಯಲ್ಲಿ ಪುರುಷರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್ ಹಾಗೂ ಹಗ್ಗಜಗ್ಗಾಟ ನಡೆಯಲಿದೆ. ಎಂದು ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷೆ ವಿಲಾಸಿನಿ, ಸ್ಥಾಯಿ ಸಮಿತಿಯ ಐಡಾ ಸುರೆಶ್, ತಹಸೀಲ್ದಾರ್ ಪುರಂದರ ಹೆಗ್ಡೆ, ಇಓ ಸಿಪ್ರಿಯಾನ್ ಮಿರಾಂಡ, ಬಿಇಓ ಶೇಷಶಯನ ಕಾರಿಂಜ, ಯುವಜನ ಲ್ರೀಡಾಧಿಕಾರಿ ನವೀನ್, ಸದಸ್ಯರಾದ ದಿನೇಶ್ ಅಮ್ಟೂರು, ಆನಂದ ಶಂಭೂರು ಶರೀಫ್ ಇದ್ದರು.