ಬಂಟ್ವಾಳ: ಕರಾವಳಿ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಕಳೆದ ಗುರುವಾರ ರಾತ್ರಿ ಕೊಲೆಗೀಡಾದ ಹರೀಶ್ ಪೂಜಾರಿ ಮನೆಗೆ ಭಾನುವಾರ ಸಂಜೆ ಭೇಟಿ ನೀಡಿದ ಅವರು, ಮನೆಮಂದಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. ಅನುಮತಿ ಪಡೆಯದೆ ಸಂಘಟನೆಗಳಿಗೆ ಪ್ರತಿಭಟನಾ ಸಭೆ ನಡೆಸಲು ಅವಕಾಶ ಕಲ್ಪಿಸಿರುವುದು ಬಂಟ್ವಾಳದ ಅಹಿತಕರ ಘಟನೆಗಳಿಗೆ ಕಾರಣವಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇದರ ಪೂರ್ಣ ಹೊಣೆಹೊರಬೇಕೆಂದು ಅವರು ಆಗ್ರಹಿಸಿದರು.
6 (1)

7
ಕರಾವಳಿಯಲ್ಲಿ ನಡೆದ ಅನಪೇಕ್ಷಿತ ಘಟನೆಗಳು ಹಾಗೂ ಅಮಾಯಕರ ಕೊಲೆ ವಿಚಾರಗಳನ್ನು ಸೋಮವಾರ ಆರಂಭಗೊಳ್ಳಲಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದ ಅವರು, ಹರೀಶ್ ಕುಟುಂಬಸ್ಥರಿಗೆ ನೀಡಿದ 5 ಲಕ್ಷ ರೂ ಪರಿಹಾರದ ಮೊತ್ತವನ್ನು ಏರಿಸಬೇಕು ಹಾಗೂ ಹರೀಶ್ ಕೊಲೆಗಡುಕರನ್ನು ಪೊಲೀಸ್ ಇಲಾಖೆ ತಕ್ಷಣ ಪತ್ತೆ ಹಚ್ಚಬೇಕು ಎಂದ ಅವರು ಇಲ್ಲವಾದಲ್ಲಿ ಗ್ರಾಮದ ಜನ ಬೀದಿಗಿಳಿದು ಹೋರಾಟ ನಡೆಸುವ ಅನಿವಾರ್ಯತೆ ಎದುರಾಗುತ್ತದೆ ಎಂದು ಎಚ್ಚರಿಸಿದರು. ಕರಾವಳಿಯಲ್ಲಿ ಉಗ್ರವಾದಿತ್ವದ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗದೇ ಇದ್ದಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು.
ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ, ಪುರಸಭಾ ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ, ಕೃಷ್ಣಪ್ಪ ಪೂಜಾರಿ ದೋಟ, ಸದಾನಂದ ನಾವೂರು ಮೊದಲಾದವರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *