ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ವಿಕಲಚೇತನ ಹೊಂದಿರುವ ಹರ್ಷಿತಾ ಕಲ್ಯಾರು ಇವರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಮಂಜೂರಾದ ರೂ 50ಸಾವಿರ ಮೊತ್ತದ ಪರಿಹಾರಧನ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಈಚೆಗೆ ವಿತರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಎಸ್.ಗಟ್ಟಿ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ಎನ್.ಪ್ರಕಾಶ ಕಾರಂತ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದ ಕೋಟ್ಯಾನ್, ಮಾಜಿ ಸದಸ್ಯ ಕೃಷ್ಣಪ್ಪ ಪೂಜಾರಿ ನಾಟಿ ಮತ್ತಿತರರು ಇದ್ದರು.