ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕುಂಜೆ ವಾರ್ಡಿನ ಅಲೆತ್ತೂರು-ನಂದರಬೆಟ್ಟು ಮತ್ತಿತರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಪುರಸಭಾ ಸದಸ್ಯೆ ಸುಗುಣ ಕಿಣಿ ಸಹಿತ ಸ್ಥಳೀಯರು ಪುರಸಭೆ ಎದುರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಮುಖ್ಯಾಧಿಕಾರಿ ಕೆ. ಸುಧಾಕರ ಭಟ್ ತಕ್ಷಣ ಸ್ಪಂದಿಸಿ ಅಲ್ಲಿಗೆ ಪ್ರತ್ಯೇಕ ಕೊಳವೆ ಬಾವಿ ಕೊರೆಯುವ ಕಾಮಗಾರಿ ಆರಂಭಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು. ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಬಿ.ದೇವದಾಸ ಶೆಟ್ಟಿ, ಭಾಸ್ಕರ ಟೈಲರ್, ಮಾಜಿ ಸದಸ್ಯರಾದ ಬೊಂಡಾಲ ಜನಾರ್ದನ ಕುಲಾಲ್, ಸುರೇಶ ಕುಲಾಲ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿ.ಆನಂದ, ರಮಾನಾಥ ರಾಯಿ ಮತ್ತಿತರರು ಇದ್ದರು.
—