ಬಂಟ್ವಾಳ:ಇಲ್ಲಿನ ಪುರಸಭಾ ವ್ಯಾಪ್ತಿಯ ಮಂಡಾಡಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಪೂರೈಕೆಯಾಗದೆ ಭಾರೀ ಸಮಸ್ಯೆಯಾಗಿದೆ ಎಂದು ಆರೋಪಿಸಿ ಮಂಡಾಡಿ ಪರಿಸರದ ನಾಗರಿಕರು ಗುರುವಾರ ಪುರಸಭಾ ಕಚೇರಿ ಎದುರು ನೆಲದಲ್ಲಿ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಪುರಸಭಾ ವ್ಯಾಪ್ತಿಯ ನಾಲ್ಕನೇ ವಾರ್ಡ್ನ ಮಂಡಾಡಿ ಪರಿಸರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಬಗ್ಗೆ ಈಗಾಗಲೇ ಪುರಸಭೆಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಪುರಸಭಾ ಸದಸ್ಯ ಬಿ.ದೇವದಾಸ ಶೆಟ್ಟಿ, ಹಿರಿಯ ಸದಸ್ಯ ಎ.ಗೋವಿಂದ ಪ್ರಭು ಮತ್ತಿತರರು ಪ್ರತಿಭಟನೆಗೆ ಸಾಥ್ ನೀಡಿದರು.
5btl-Purasabhe
ಇದೇ ವೇಳೆ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಪ್ರತಿಭಟನಾಕಾರರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆ ಬಗೆಹರಿಸಲು ಶೀಘ್ರವೇ ತ್ವರಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು. ಪ್ರತಿಭಟನೆಯಲ್ಲಿ ಚಂದ್ರಶೇಖರ ಭಂಡಾರಿ, ಜಗನ್ನಾಥ, ಸುರೇಶ್, ಹರೀಶ್ಚಂದ್ರ ಮಂಡಾಡಿ, ಯುವರಾಜ ಆಚಾರ್ಯ, ಜನಾರ್ದನ, ಅಬೂಬಕ್ಕರ್, ರಶೀದ್, ಸರೋಜ, ಸಫಿಯಾ ಭಾನು ಮತ್ತಿತರರು ಪಾಲ್ಗೊಂಡರು.

By suddi9

Leave a Reply

Your email address will not be published. Required fields are marked *