ಮಂಗಳೂರು: ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೆÇಲೀಸ್ ಇಲಾಖೆಗೆ ಸೂಚನೆ ನೀಡುತ್ತೇನೆ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಪತ್ರಕರ್ತರಿಗೆ ಭರವಸೆ ನೀಡಿದರು.
ಮಾಧ್ಯಮದವರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.
ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ಕಾರ್ಯದರ್ಶಿಶ್ರೀನಿವಾಸ ಇಂದಾಜೆ, ಪಿ.ಬಿ. ಹರೀಶ್ ರೈ, ಮುಹಮ್ಮದ್ ಆರೀಫ್, ಪುಷ್ಪರಾಜ್ ಬಿ.ಎನ್, ಜಿತೇಂದ್ರ ಕುಂದೇಶ್ವರ, ತಾರಾನಾಥ ಕಾಪಿಕ್ಕಾಡ್, ಪ್ರಕಾಶ್ ಪಾಂಡೇಶ್ವರ, ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.