ಬಂಟ್ವಾಳ : ಮಂಗಳೂರು ಕಂಕನಾಡಿಯ ಪ್ರಜ್ಞಾ ಸಲಹಾ ಕೇಂದ್ರದ ಹೆಣ್ಣು ಮಕ್ಕಳ ಸಂರಕ್ಷಿತ ಹಕ್ಕುಗಳನ್ನು ಬಲಪಡಿಸುವ ಯೋಜನೆಯಡಿಯಲ್ಲಿ ಮಕ್ಕಳ ಹಕ್ಕು, ಪೋಕ್ಸೋ ಕಾಯ್ದೆ, ಲಿಂಗತಾರತಮ್ಯ ಕುರಿತಾಗಿ ಜಾಗೃತಿ ಮಾಹಿತಿ ಶಿಬಿರವು ಮಂಗಳವಾರ ನರಿಕೊಂಬು ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಪತ್ರಕರ್ತ ಮೌನೇಶ ವಿಶ್ವಕರ್ಮ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಮಾಹಿತಿ ನೀಡಿದರು. ವೇದಿಕೆಯಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರವಿ ಅಂಚನ್, ಉಪಾಧ್ಯಕ್ಷೆ ವೀಣಾ, ಶಾಲಾ ಮುಖ್ಯೋಪಾಧ್ಯಾಯಿನಿ ಶಾರದಾ ಮೊದಲಾದವರು ಉಪಸ್ಥಿತರಿದ್ದರು. ಪ್ರಜ್ಞಾ ಸಲಹಾಕೇಂದ್ರದ ಯೋಜನಾ ಸಂಯೋಜಕ ಪ್ರದೀಪ್ ಕಾಮತ್ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತರಾದ ಕು.ನಿವ್ಯಾಶ್ರೀ ಸ್ವಾಗತಿಸಿ, ಕು.ಚಿಂತನಾ ವಂದಿಸಿದರು.