ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ತಡ್ಯಾಲುಗುತ್ತು ನಿವಾಸಿ ಕೃಷಿಕ ಪ್ರಸಾದ್ ಶೆಟ್ಟಿ(48) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು.
ಅವಿವಾಹಿತರಾಗಿದ್ದ ಇವರಿಗೆ ಇಬ್ಬರು ಸಹೋದರು ಇದ್ದಾರೆ. ಸೌಮ್ಯ ಸ್ವಭಾವ ಹೊಂದಿದ್ದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಸುಜೀರು ಹುಟ್ಟೂರಿನಲ್ಲಿ ಮಂಗಳವಾರ ಸಂಜೆ ನಡೆಯಿತು.