ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೇ 14ರಂದು ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆಯೊಬ್ಬರು ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮಂಗಳೂರಿನ ಶವಾಗಾರದಲ್ಲಿರಿಸಲಾಗಿದೆ. ಈ ಮೃತ ಮಹಿಳೆಯ ವಾರೀಸುದಾರರಿದ್ದಲ್ಲಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *