ಮುಂಬೈ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸ್ವದೇಶಿ ಜಾಗರಣ ಮಂಚ್ ಸಂಘಟನೆಯ ಕಾರ್ಯಕರ್ತರು ನಡೆಸಿದ ಹಲ್ಲೆ ಹಾಗೂ ಜಾರ್ಖಂಡ್‍ನಲ್ಲಿ ಅಪ್ರಾಪ್ತ ಬಾಲಕನ ಹತ್ಯೆಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿಯ ವತಯಿಂದ ಬಂಟ್ವಾಳ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷ ಅಶ್ವಾನ್ ಸಾದಿಕ್, ನಮ್ಮ ದೇಶದ ಮುಂದಿನ ನಾಯಕತ್ವವನ್ನು ಹಿಡಿಯಬೇಕಾದ ವಿದ್ಯಾರ್ಥಿಗಳು ತಮ್ಮ ಮೇಲಾಗುವ ದೌರ್ಜನ್ಯದ ವಿರುದ್ಧ ಪ್ರತಿಭಟಿಸುಯತ್ತಿರುವ ಸಂದರ್ಭದಲ್ಲಿ ಹಲ್ಲೆ ನಡೆಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ, ಬಿಜೆಪಿ ಸರಕಾರವು ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿ ಮೀರಿದೆ, ಇಂತಹ ಘಟನೆಯ ಬಗ್ಗೆ ಮಧ್ಯಪ್ರವೇಶಿಸಬೇಕಿದ್ದ ಪ್ರಧಾನ ಮಂತ್ರಿಗಳು ಇಂದು ದೇಶ ವಿದೇಶಗಳಿಗೆ ಸುತ್ತುತ್ತಿರುವುದು ಅತ್ಯಂತ ದೌರ್ಭಾಗ್ಯಕರ ಸಂಗತಿಯಾಗಿದೆ.

DSC_1257ಈ ದೇಶದಿಂದ ಸಂಘಪರಿವಾರದ ಬೇರು ಕಿತ್ತೆಯುವ ತನಕ ಈ ದೇಶ ಸ್ವತಂತ್ರಗೊಳ್ಳಲು ಸಾಧ್ಯವಿಲ್ಲ ಎಂದರು. ಪ್ರತಿಭಟನಾ ಸಭೆಯಲ್ಲಿ ತಾಲೂಕು ಉಪಾಧ್ಯಕ್ಷ ಮುಹಮ್ಮದ್ ಇಮ್ರಾನ್, ತಾಲೂಕು ಸಮಿತಿ ಸದಸ್ಯರಾದ ಖಾದರ್, ಫಹದ್ ಮುಂತಾದವರು ಉಪಸ್ಥಿತರಿದ್ದರು. ಪ್ರತಿಭಟನಾ ಸಭೆಯಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗಲಾಯಿತು.

By suddi9

Leave a Reply

Your email address will not be published. Required fields are marked *