ವಾಮಂಜೂರು: ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನದ ಸ್ಮರಣಾರ್ತ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಭಕ್ತಿ ಶ್ರದ್ಧೆಯಿಂದ ಆಚರಿದರು. ವಾಮಂಜೂರು ಶ್ರಮಿಕ ಸಂತ ಜೋಸೆಫರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.
ಚರ್ಚ್ ಮತ್ತು ಚರ್ಚ್ ಆವರಣದಲ್ಲಿ ಯೇಸು ಕ್ರಿಸ್ತರ ಶಿಲುಭೆಯ ಮರಣ ಶಿಕ್ಷೆ ವಿಧಿಸಿದಲ್ಲಿಂದ ತೊಡಗೆ ಅವರು ಶಿಲುಬೆಯಲ್ಲಿ ಪ್ರಾಣ ತ್ಯಾಗ ಮಾಡಿ ಸಮಾಧಿ ಮಾಡುವಲ್ಲಿನ 14 ಪ್ರಮುಖ ಘಟನಾವಳಿಗೆ ಸಂಬಂಧಿಸಿ ಶಿಲುಬೆಯ ಹಾದಿ ಆಚರಿಸುವ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಕಷ್ಟ ಸಂಕಷ್ಟಗಳ ಸ್ಮರಣೆ ಮಾಡಲಾಯಿತು.
ವಾಮಂಜೂರು ಚರ್ಚಿನ ಧರ್ಮ ಗುರುಗಳಾದ ವಂದನೀಯ ಸ್ವಾಮಿ ಸಿಪ್ರಿಯನ್ ಪಿಂಟೊ ರವರು ಈ ಧಾರ್ಮಿಕ ವಿಧಿ ವಿದಾನಗಳನ್ನು ನೆರವೆರಿಸಿದರು. 3,000 ಕ್ಕು ಹೆಚ್ಹಿನ ಕ್ರೈಸ್ತ ಬಾಂಧವರು ಉಪಸ್ಥಿತರಿದ್ದರು.















