ಬಂಟ್ವಾಳ:ತಾಲ್ಲೂಕಿನ ತುಂಬೆ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಶಂಭೂರು ಎಎಂಆರ್ ಕಿರು ಜಲವಿದ್ಯುತ್ ಘಟಕದಿಂದ ಹೆಚ್ಚುವರಿ ನೀರನ್ನು ಬಿಡುಗಡೆಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಯು ಸೂಚಿಸಿದೆ. ಇದರಿಂದಾಗಿ ಶಂಭೂರು ಎಎಂಆರ್ ಅಣೆಕಟ್ಟೆ ಕೆಳಭಾಗದ ನಿವಾಸಿಗಳು ಸಾಕು ಪ್ರಾಣಿಗಳ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಪ್ರಕಟಣೆ ಮೂಲಕ ಎಚ್ಚರಿಸಿದೆ.