ಬಂಟ್ವಾಳ:ಧಾರ್ಮಿಕ ಅಂಧಶ್ರದ್ಧೆ ಎಂಬ ಪೊರೆ ಕಳಚಿಕೊಂಡು ನಿರ್ಮಲ ಮನಸ್ಸು ಮತ್ತು ಭಕ್ತಿಯಿಂದ ದೇವರ ಆರಾಧನೆ ಮಾಡಿದಾಗ ಮನಶಾಂತಿ ಜೊತೆಗೆ ವಿಜ್ಞಾನವನ್ನೂ ಮೀರಿಸುವಂತೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಮಂಚಿ ಸುಳ್ಯ ಶ್ರೀ ಮಹಾದೇವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಸಭೆ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಧಾರ್ಮಿಕತೆ ಮೂಲಕ ಸಮಾಜ ಸಂಘಟಿತಗೊಳ್ಳುತ್ತದೆ ಎಂದರು.
ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ, ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಜಯರಾಮ ಭಟ್, ವಿಧಾನಪರಿಷತ್ತಿನ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ತಾಲಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿ, ಉದ್ಯಮಿ ಬಿ.ರಘು ಸೋಮಯಾಜಿ, ಪತ್ರಕರ್ತ ರಾಜಾ ಬಂಟ್ವಾಳ, ಪ್ರಮುಖರಾದ ಎನ್.ಪ್ರಕಾಶ ಕಾರಂತ, ಟಿ.ತಾರನಾಥ ಕೊಟ್ಟಾರಿ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಮಿತಿ ಅಧ್ಯಕ್ಷ ಜಗದೀಶ ರಾವ್ ಪತ್ತುಮುಡಿ, ಉಪಾಧ್ಯಕ್ಷ ಸೂರ್ಯನಾರಾಯಣ ರಾವ್, ಪ್ರಮುಖರಾದ ವೆಂಕಟೇಶ ರಾವ್ ಪತ್ತುಮುಡಿ, ಅನಂತಯ್ಯ ಪತ್ತುಮುಡಿ, ಭಜನಾ ಮಂಡಳಿ ಅಧ್ಯಕ್ಷ ಪವನ್ ಕುಮಾರ್ ಚೌಕದಪಾಲು ಮತ್ತಿತರರು ಇದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಶಂಕರ ಐತಾಳ್ ಚೌಕದಪಾಲು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎನ್.ಕೇಶವ ರಾವ್ ನೂಜಿಪ್ಪಾಡಿ ವಂದಿಸಿದರು. ಪುಷ್ಪರಾಜ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.