ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮುದೆಲ್ ಮುಟ್ಟಿ ಶ್ರೀ ನಾಲ್ಕೈತ್ತಾಯ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಶ್ರೀ ನಾಲ್ಕೈತ್ತಾಯ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯ ತಾ.ಪಂ.ಸದಸ್ಯರಾದ ಸಂಜೀವ ಪೂಜಾರಿ , ಅಬ್ಬಾಸ್ ಆಲಿ, ಸಜಿಪ ಮೂಡ ಗ್ರಾ.ಪಂ.ಅಧ್ಯಕ್ಷ ಗಣಪತಿ ಭಟ್ ಎನ್.ಕೆ, ತಾ.ಆರಾದನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಗ್ರಾ.ಪಂ.ಸದಸ್ಯರಾದ ವಿಶ್ವನಾಥ ಬೆಳ್ಚಾಡ, ರಮೇಶ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ, ಪದಾಧಿಕಾರಿಗಳಾದ ಎಂ.ಸುಬ್ರಹ್ಮಣ್ಯ ಭಟ್, ಪರಮೇಶ್ವರ ಎಂ., ಮನೋಜ್ ಆಳ್ವ, ಧನಂಜಯ ಶೆಟ್ಟಿ, ಶಿವರಾಮ ಬ್ರಾಸಿತ್ತಾಯ ಉಪಸ್ಥಿತರಿದ್ದರು.
