ಬಂಟ್ವಾಳ:ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಆಲಾಡಿ ಎಂಬಲ್ಲಿ ರಿಕ್ಷಾ ಚಾಲಕರೊಬ್ಬರಿಗೆ ತಂಡವೊಮದು ಹಲ್ಲೆ ನಡೆಸಿ ಬಳಿಕ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಪಸ್ಪರ ದೂರು ದಾಖಲಾದ ಘಟನೆ ಶನಿವಾರ ನಡೆದಿದೆ.
ಗಾಯಾಳುವನ್ನು ಸ್ಥಳೀಯ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ರಿಕ್ಷಾ ಚಾಲಕ ಮುಹಮ್ಮದ್ ಹ್ಯಾರಿಸ್ ಎಂದು ಗುರುತಿಸಲಾಗಿದ್ದು, ಕಾಲಿಗೆ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಶರೀಫ್, ಇಸ್ಮಾಯಿಲ್, ಆದಂ, ಯೂಸುಫ್, ಬದ್ರುದ್ದೀನ್ ಮತ್ತಿತರರ ಒಟ್ಟು 11 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಇವರು ರಿಕ್ಷಾ ಚಾಲಕ ಹ್ಯಾರಿಸ್ ವಿರುದ್ಧವೂ ಪ್ರತಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.