ಬಂಟ್ವಾಳ ತಾಲೂಕು ಪೆರಾಜೆ ಮತ್ತು ಮಾಣಿ ಗ್ರಾಮ ಪಂಚಾಯತ್ ಘನತ್ಯಾಜ್ಯ ವಿಲೇವಾರಿ ಘಟಕದ ಸಮಾಲೋಚನಾ ಸಭೆಯು ದಿನಾಂಕ 09/07/2016 ನೇ ಶನಿವಾರ ಪೆರಾಜೆ ಗ್ರಾಮ ಪಂಚಾಯತ್ನ ಸಬಾಂಗಣದಲ್ಲಿ ಪೆರಾಜೆ ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಪೂರ್ಣ ಸ್ವಚ್ಛತಾ ಆಂದೋಲನಾದ ಸಂಯೋಜಕಿ ಶ್ರೀಮತಿ ಮಂಜುಳಾ ಇವರು ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

Untitled-1

-2

Untitled-1-2 copy

ದ.ಕ ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿಯವರಾದ ಶ್ರೀ ಉಮೇಶ್ ಎನ್ ಆರ್ ಇವರು ಮಾತಾಡಿ ಘನತ್ಯಾಜ್ಯ ನಿರ್ಮಾಣದ ಬಗ್ಗೆ ಜಿಲ್ಲಾ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯನ್ನು ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಕುಶಲ ಎಂ ಪೆರಾಜೆ , ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಎಸ್ ಶೆಟ್ಟಿ, ಪೆರಾಜೆ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಮಾಣಿ ಗ್ರಾಮ ಪಂಚಾಯತ್ನ ಸದಸ್ಯರು ಪೆರಾಜೆ ಗ್ರಾಮ ಪಂಚಾಯತ್ ಮತ್ತು ಮಾಣಿ ಗ್ರಾಮ ಪಂಚಾಯತ್ನ ಅಭಿವೃದ್ದಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *