ಬಂಟ್ವಾಳ:ಭ್ರಷ್ಟಾಚಾರ,ಸ್ವಜನ ಪಕ್ಷಪಾತದಿಂದ ತುಂಬಿ ತುಳುಕುತ್ತಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಕಾರ್ಯ ಮುಂದಿನ ಚುನಾವಣೆಯಲ್ಲಿ ನಡೆಯಬೇಕಾಗಿದ್ದು ಪಕ್ಷದ ಕಾರ್ಯಕರ್ತರು ಈ ನಿಟ್ಟಿನಲ್ಲಿ ಈಗಿಂದೀಗಲೇ ಸಜ್ಜಾಗುವಂತೆ ಮಾಜಿ ಸಚಿವ,ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ನಾಗರಾಜ ಶೆಟ್ಟಿ ಅವರು ಕರೆ ನೀಡಿದ್ದಾರೆ.ಬಿಜೆಪಿ ಚೆನ್ನೈತ್ತೋಡಿ ಗ್ರಾಮ ಸಮಿತಿಯ ಆಶ್ರಯದಲ್ಲಿ ನೂತನ ಜಿಲ್ಲಾಧ್ಯಕ್ಷ ಮತ್ತು ಬಂಟ್ವಾಳ ಮಂಡಲಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬಂಟ್ವಾಳ ತಾಲೂಕಿನ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಪಕ್ಷದ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದೆ .ರಾಜ್ಯದಲ್ಲಿ ಕಾಂಗ್ರೆಸ್ನ ದುರಾಡಳಿತದಿಂದಾಗಿ ಸಾಮಾನ್ಯ ಜನರು ಮತ್ತು ಅಧಿಕಾರಿಗಳು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದ ಅವರು ದೇಶ ಮತ್ತು ನಮ್ಮ ರಾಜ್ಯದ ರಕ್ಷಣೆ ಪಕ್ಷದ ಕಾರ್ಯಕರ್ತರ ಹೊಣೆಯಾಗಿದ್ದು ಮುಂದಿನ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ಈ ದಿಸೆಯಲ್ಲಿ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ಮಾತನಾಡಿ ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿ .ರಾಷ್ಟ್ರೀಯ ಕಲ್ಪನೆಯೊಂದಿಗೆ ಸ್ವಯಂ ಸೇವಕತ್ವದಡಿಯಲ್ಲಿ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿಯುವ ಕೋಟ್ಯಾಂತರ ಕಾರ್ಯಕರ್ತರ ಶ್ರಮದ ಫಲವಾಗಿ ಇಂದು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಜನ ಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡುವುದರೊಂದಿಗೆ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲೂ ಪಕ್ಷ ಅ„ಕಾರಕ್ಕೆ ಬರಲು ಪಣ ತೊಡಬೇಕೆಂದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ,ಭಾ.ಜ.ಪ ಮುಖಂಡ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ , ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ,ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಬಿ.ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ,ಕ್ಷೇತ್ರದ ಉಪಾಧ್ಯಕ್ಷ ವಿಜಯ ರೈ ಆಲದಪದವು,ಗ್ರಾ.ಪಂ.ಸದಸ್ಯರಾದ ಮೋಹನ್ದಾಸ್ ಗಟ್ಟಿ ,ಲಕ್ಷ್ಮಿ ,ಹಿರೇಬಂಡಾಡಿ ಪಂಚಾಯತ್ ಅಧ್ಯಕ್ಷ ಶೌಕತ್ಆಲಿ, ಎಪಿ.ಎಂ.ಸಿ ಸದಸ್ಯ ರತ್ನಕುಮಾರ್ ಚೌಟ,ಪ್ರಮುಖರಾದ ಆನಂದಿ ಆರ್.ಪೂಜಾರಿ,ವರದ್ರಾಜ್ ಪೈ,ಪುರುಷೋತ್ತಮ ಶೆಟ್ಟಿ ,ಸಂತೋಷ್ ಕುಮಾರ್ರಾಯಿಬೆಟ್ಟು ,ಚೆನ್ನೈತ್ತೋಡಿ ಗ್ರಾಮ ಬಿಜೆಪಿ ಸಮಿತಿ ಅಧ್ಯಕ್ಷ ಕಾಪು ಜಯರಾಮ್ ಶೆಟ್ಟಿ, ಪ್ರ.ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ಇತ್ತೀಚೆಗೆ ನಿಧನರಾದ ಹಿರಿಯ ಯಕ್ಷಗಾನ ಕಲಾವಿದ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ,ಪಕ್ಷದ ಕಾರ್ಯಕರ್ತರಾದ ಚಂದ್ರಶೇಖರ ಶೆಟ್ಟಿ ಕಂಜಾರು,ವಿಠಲ್ ಶೆಟ್ಟಿ ಕುಂಡೋಳಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.ಹಾಗೇಯೆ ನೂತನಾವಾಗಿ ಆಯ್ಕೆಯಾದ ಪಕ್ಷದ ಪದಾಧಿಕಾರಿಗಳನ್ನು ಸಮ್ಮಾನಿಸಲಾಯಿತು. ರಾಜ್ಯ ಕಾರ್ಯಕಾರಣಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್ ಅವರು ಪ್ರಸ್ತಾವಿಸಿ,
ಸ್ವಾಗತಿಸಿದರು. ಶಾಂಪ್ರಸಾದ್ ಪೂಂಜ ಅವರು ವಂದೇ ಮಾತರಂ ಗೀತೆ ಹಾಡಿದರು.ಭರತ್ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.