ಮೂಡುಬಿದಿರೆ: ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಇರುವ ಅಗ್ನಿಶಾಮಕ ಠಾಣೆಯಲ್ಲಿ 70ನೇ ಸ್ವಾತಂತ್ರೋತ್ಸವ ಸಂಭ್ರಮ ಹಾಗೂ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಇಲಾಖೆಯು, ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯವನ್ನು ನಿರ್ವಸುವ ಸಾಧಕರಿಗೆ ಕೊಡ ಮಾಡುವ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು.
mbd_aug15_2
ಮೂಡುಬಿದಿರೆ ಅಗ್ನಿಶಾಮಕ ಠಾಣಾಧಿಕಾರಿ ಕಿಶೋರ್ ಕುಮಾರ್ ಅವರು ಧ್ವಜವನ್ನು ಅರಳಿಸಿದರು. ನಂತರ ಇಲಾಖೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಅಪತ್ಕಾಲದಲ್ಲಿದ್ದ ಮನುಷ್ಯರು ಹಾಗೂ ಪ್ರಾಣಿಗಳ ಜೀವ ರಕ್ಷಣೆಯನ್ನು ಮಾಡಿರುವ ಸಿಬಂದಿಗಳಾದ ಸತೀಶ್ ಹಾಗೂ ಕೃಷ್ಣ ನಾಯ್ಕ್ ಅವರಿಗೆ ಪ್ರಶಂಸನಾ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಠಾಣಾಧಿಕಾರಿ ಪ್ರವೀಣ್ ಮತ್ತು ಸಿಬಂದಿಗಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *