ಮೂಡುಬಿದಿರೆ: ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಹಿಳಾ ಮೋರ್ಚಾದ ವತಿಯಿಂದ ಮೂಡುಬಿದಿರೆ ಸಮಾಜಮಂದಿರದಲ್ಲಿ ರಕ್ಷಬಂಧನ ಕಾರ್ಯಕ್ರಮ ಗುರುವಾರ ನಡೆಯಿತು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಭಾರತೀಯ ಪರಂಪರೆಯನ್ನು ಸಾರುವ ರಕ್ಷಾಬಂಧನ ಹಬ್ಬವನ್ನು ಪಕ್ಷದ ಮಹಿಳಾಮೋರ್ಚಾದವರು ಆಚರಿಸುತ್ತಿರುವುದು ಅರ್ಥಪೂರ್ಣವಾದದ್ದು ಎಂದರು.

mbd_aug18_4 (1)

mbd_aug18_4 (2)

mbd_aug18_4 (3)

mbd_aug18_4 (4)
ಎಕ್ಸಲೆಂಟ್ ಕಾಲೇಜಿನ ಸಂಸ್ಕøತ ಉಪನ್ಯಾಸಕ ಪ್ರಜ್ವಲ್ ಪ್ರಮುಖ ಬೌದ್ಧಿಕ್ ನೀಡಿ, ರಾಜಕೀಯ ಶಕ್ತಿಯ ಹೊರತಾಗಿ ಭಾರತೀಯತೆಯನ್ನು ಪ್ರಜ್ವಲಿಸುವಂತೆ ಮಾಡುವ ಸಂಕಲ್ಪ, ರಕ್ಷಬಂಧನದ ದಿನ ಪ್ರತಿಯೊಬ್ಬ ಭಾರತೀಯ ಮಾಡಬೇಕು. ರಾಷ್ಟ್ರೀಯತೆ ದೃಷ್ಠಿಕೋನದೊಂದಿಗೆ ಸಮ ಮನಸ್ಥಿತಿಯೊಂದಿಗೆ ನಾವು ಮುನ್ನಡೆಯಬೇಕಾಗಿದೆ ಎಂದರು.
ಮಾಜಿ ಸೈನಿಕರು ಹಾಗೂ ಬಿಜೆಪಿ ಪಕ್ಷದ ಮುಖಂಡರಿಗೆ ರಕ್ಷೆಯನ್ನು ಕಟ್ಟಲಾಯಿತು.
ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಜಯಲಕ್ಷ್ಮಿ ನಾಯಕ್, ಮೂಲ್ಕಿ-ಮೂಡುಬಿದಿರೆ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಂದನಾ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ್ ಅಧಿಕಾರಿ, ರಾಜ್ಯ ಪರಿಷತ್ ಸದಸ್ಯ ಕೆ.ಆರ್ ಪಂಡಿತ್, ಜಿಲ್ಲಾ ಕಾರ್ಯಕಾರಣಿ ಸದಸ್ಯ ದೇವಿ ಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುದರ್ಶನ್, ಕ್ಷೇತ್ರ ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಕೋಶಾಧಿಕಾರಿ ಪ್ರಸಾದ್, ನಗರ ಶಕ್ತಿ ಕೇಂದ್ರದ ಕಾರ್ಯದರ್ಶಿ ಹರೀಶ್ ಎಂ.ಕೆ ಉಪಸ್ಥಿತರಿದ್ದರು.
ಅನಿತಾ ಬಲ್ಲಾಳ್ ಸ್ವಾಗತಿಸಿದರು. ಗೀತಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಶುಭಾ ಹೆಬ್ಬಾರ್ ವಂದಿಸಿದರು.

—

By suddi9

Leave a Reply

Your email address will not be published. Required fields are marked *