ಮಂಗಳೂರು:ಶಿಕ್ಷಣವು ಸಾರ್ವತ್ರಿಕವಾಗಿ, ಉಚಿತವಾಗಿ ಪಡೆಯಬೇಕು ಎಂಬುದು ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದೆ. ಆದರೂ ಕೆಲವೊಂದು ವಿಚಾರಗಳಿಂದ ಇಂದು ಮಕ್ಕಳು ವಿದ್ಯಾಭ್ಯಾಸವನ್ನು ಅರ್ಧದಲ್ಲೇ ಮೊಟಕುಗೊಳಿಸುತ್ತಿರುವರು. ಅದರಲ್ಲೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲಿ ನಿಲ್ಲಿಸುವುದನ್ನು ಮನಗಂಡ ಜಮೀಯ್ಯತ್ತುಲ್ ಫಲಾಹ್ ಸಂಸ್ಥೆಯು ವಿದ್ಯಾಭ್ಯಾಸವನ್ನು ಮುಂದುವರಿಸಲು ವಿಫುಲವಾದ ಅವಕಾಶವನ್ನು ಮಾಡಿಕೊಟ್ಟಿದೆ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜನಾಬ್ ಹಾಜಿ ಇಬ್ರಾಹಿಂ ಕೋಡಿಜಾಲ್‍ರವರು ಹೇಳಿದರು. ಅವರು ಇತ್ತೀಚೆಗೆ ಜಮೀಯ್ಯತ್ತುಲ್ ಫಲಾಹ್ ಮಂಗಳೂರು ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ ಜಮೀಯ್ಯತ್ತುಲ್ ಫಲಾಹ್ ಸಂಸ್ಥೆಯು ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಪುಸ್ತಕ, ಯೂನಿಫಾರಂ ಹಾಗೂ ವಿದ್ಯಾರ್ಥಿ ವೇತನ ನೀಡುವುದರೊಂದಿಗೆ ಉನ್ನತ ಶಿಕ್ಷಣಕ್ಕೆ ಸಹಕಾರ ನೀಡುತ್ತಿದೆ ಎಂದರು.
IMG-20160808-WA0033
ಸಮಾರಂಭದ ಅಧ್ಯಕ್ಷತೆಯನ್ನು ಜಮೀಯ್ಯತ್ತುಲ್ ಫಲಾಹ್ ಉಡುಪಿ-ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಹಾಜಿ ಶಾಹುಲ್ ಹಮೀದ್‍ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಮೀಯ್ಯತ್ತುಲ್ ಫಲಾಹ್ ಜಿಲ್ಲಾಕಾರ್ಯದರ್ಶಿ ಜುಬೇರ್ ಷಾ, ಕೋಶಾಧಿಕಾರಿ ಝಮೀರ್ ಅಂಬರ್ ಬಂಟ್ವಾಳ ತಾಲೂಕು ಅಧ್ಯಕ್ಷ ಬಿ.ಎಂ ತುಂಬೆ ಉಪಸ್ಥಿತರಿದ್ದರು. ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ವಹಾಬ್‍ರವರು ಸ್ವಾಗತಿಸಿ, ಕಾರ್ಯದರ್ಶಿ ಕೆ.ಎಂ.ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು. ಜತೆಕಾರ್ಯದರ್ಶಿ ಉಸ್ಮಾನ್ ವಂದಿಸಿದರು.

ಕೆ.ಎಂ.ಕೆ ಮಂಜನಾಡಿ

By suddi9

Leave a Reply

Your email address will not be published. Required fields are marked *