ಮೂಡುಬಿದಿರೆ: ಕೋಟಿಚೆನ್ನಯ ಜೋಡುಕರೆ ಕಂಬಳ ಸಮಿತಿ ಮೂಡುಬಿದಿರೆ ಇದರ ಆಶ್ರಯದಲ್ಲಿ ತುಳುನಾಡ ಬಲಿಯೇಂದ್ರ ತಾಳಮದ್ದಳೆ ಹಾಗೂ ಕುರುಕ್ಷೇತ್ರಕ್ಕೊಂದು ಆಯೋಗ ಯಕ್ಷಗಾನ ರೂಪಕ ಪದ್ಮಾವತಿ ಕಲಾ ಮಂದಿರದಲ್ಲಿ ನಡೆಯಿತು. ಪ್ರಸಿದ್ಧ ಛಾಂದಸ `ಅಭಿನವ ನಾಗವರ್ಮ’ ಬಿರುದಾಂಕಿತ ಡಾ. ಶಿಮಂತೂರು ನಾರಾಯಣ ಶೆಟ್ಟಿ ಹಾಗೂ ಪ್ರಸಂಗಕರ್ತ ಗಣೇಶ ಕೊಲೆಕಾಡಿ ಅವರನ್ನು ಸನ್ಮಾನಿಸಲಾಯಿತು. ಮುಡುಬಿದಿರೆ ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಅವರ ಅಧ್ಯಕ್ಷತೆಯ ಶಾಸಕ ಕೆ. ಅಭಯಚಂದ್ರ ಜೈನ್, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ವೇ.ಮೂ. ಶ್ರೀಹರಿನಾರಾಯಣದಾಸ ಆಸ್ರಣ್ಣ, ಉದ್ಯಮಿ ಕೆ. ಶ್ರೀಪತಿ ಭಟ್, ಯಕ್ಷಗಾನ ಪೋಷಕ ಭುಜಬಲಿ ಧರ್ಮಸ್ಥಳ, ಕಂಬಳ ಸಮಿತಿ ಪದಾಧಿಕಾರಿಗಳಾದ ಕೆ. ಗುಣಪಾಲ ಕಡಂಬ, ಇರ್ವತ್ತೂರು ಭಾಸ್ಕರ ಎಸ್. ಕೋಟ್ಯಾನ್, ಸುರೇಶ್ ಪ್ರಭು ಉಪಸ್ಥಿತರಿದ್ದರು.

mbd_aug24_5

ರತ್ನಾಕರ ಸಿ. ಮೊಯಿಲಿ ಹಾಗೂ ಪುಚ್ಚಮೊಗರು ಬಾವದಗುತ್ತು ಪದ್ಮಪ್ರಸಾದ್ ಜೈನ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ಸಂಯೋಜಕ ಎಂ. ಶಾಂತರಾಮ ಕುಡ್ವ ಸ್ವಾಗತಿಸಿದರು. ಪಡ್ಡಂದಡ್ಕ ಉಮೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *