ಬಂಟ್ವಾಳ : ಶ್ರೀ ಕೃಷ್ಣನ ಬಾಲ್ಯ ಲೀಲೆಗಳು ಸರ್ವಕಾಲಿಕ ಸಂತಸವನ್ನು ನೀಡುತ್ತವೆ. ಭಗವದ್ಗೀತೆ ಅಧ್ಯಯನದ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅರ್ಥಪೂರ್ಣವಾಗಿ ಆಚರಿಸಬಹುದು ಎಂದು ಬಡಗಬೆಳ್ಳೂರು ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಂಚಯಗಿರಿ ಸಂಕಪ್ಪ ಶೆಟ್ಟಿ ನುಡಿದರು. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಿ.ಸಿ.ರೋಡ್ನ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ 39ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ್ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ , ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಿ.ಸಿ.ರೋಡ್, ಪುರಸಭಾ ಸದಸ್ಯ ಬಿ.ಮೋಹನ್, ಶಿವಕುಮಾರ್ ಬ.ಸಿ.ರೋಡ್, ಲೋಕನಾಥ ಶೆಟ್ಟಿ, ರಾಜೇಶ್ ಬಿ. ಉಪಸ್ಥಿತರಿದ್ದರು. ಪುಷ್ಪರಾಜ ಶೆಟ್ಟಿ ಸ್ವಾಗತಿಸಿದರು. ಶ್ರೀಧರ ಶೆಣೈ ವಂದಿಸಿ , ಲಿಂಗಪ್ಪ ಮಾಸ್ತರ್ ಕಾರ್ಯಕ್ರಮ ನಿರ್ವಹಿಸಿದರು. ಆಟೋಟ ಸ್ಪರ್ಧೆ , ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ವಿದ್ಯಾರ್ಥಿಗಳಿಗೆ ರಸಪ್ರಶ್ನೆ , ಸಂಗೀತ ಸ್ಪರ್ಧೆ , ಕೃಷ್ಣ ವೇಷ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
