ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ಜುಮ್ಮಾ ಮಸೀದಿ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬಿ.ಸಿ.ರೋಡಿಗೆ ಬರುತ್ತಿದ್ದ ಸರ್ಕಾರಿ ಬಸ್ಸಿಗೆ ಮಂಗಳವಾರ ಮಧ್ಯಾಹ್ನ ಡಿಕ್ಕಿ ಹೊಡೆದ ಕಾರಿನ ಹಿಂಬದಿ ಲಾರಿ ಸರಣಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
