ಮೂಡುಬಿದಿರೆ: ಪರವಾನಿಗೆ ಇಲ್ಲದೆ ಮರಳು ಸಾಗಿಸುತ್ತಿದ್ದ ಟಿಪ್ಪರೊಂದನ್ನು ಪುರಸಭಾ ವ್ಯಾಪ್ತಿಯ ಅಲಂಗಾರಿನಲ್ಲಿ ಶನಿವಾರ ಮೂಡುಬಿದಿರೆ ಪೊಲೀಸರು ವಾಹನ ತಪಾಸಣೆ ಸಂದರ್ಭ ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಸಿಬ್ಬಂದಿಗಳೊಂದಿಗೆ ಮಾರ್ಪಾಡಿ ಗ್ರಾಮದ ಅಲಂಗಾರು ಜಂಕ್ಷನ್‍ನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರು.

maralu

ಈ ಸಂದರ್ಭ ಗಂಜಿಮಠ ಕಡೆಯಿಂದ ಕಾರ್ಕಳದ ಕಡೆಗೆ ಪರವಾನಿಗೆ ಮರಳು ಸಾಗಾಟ ಮಾಡುತ್ತಿದ್ದ ಕೆಎ 19 ಎಬಿ 4759 ಸಂಖ್ಯೆ ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *