ಬಂಟ್ವಾಳ: ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಸೋರ್ಣಾಡು ಎಂಬಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೃತರನ್ನು ಇಲ್ಲಿನ ಸೋರ್ಣಾಡು ಶಾಲಾ ಬಳಿ ನಿವಾಸಿ ಚೆನ್ನಪ್ಪ ಮೂಲ್ಯ(84) ಎಂದು ಗುರುತಿಸಲಾಗಿದೆ. ಇವರು ಗುರುವಾರ ಬೆಳಿಗ್ಗೆ ಮನೆಯಿಂದ ನಾಪತ್ತೆಯಾಗಿದ್ದು, ಮನೆಯವರು ರಾತ್ರಿತನಕವೂ ಭಾರೀ ಹುಡುಕಾಟ ನಡೆಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಇಲ್ಲಿನ ನಿವಾಸಿ ಆಶಾ ಲೋಬೊ ಎಂಬವರ ಕೆರೆಯಲ್ಲಿ ಮೃತ ದೇಹ ಕಂಡು ಬಂದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
