ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಮೂಡಿಸುವುದರ ಜೊತೆಗೆ ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾಯೋಜನೆ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

17btl-svs

ಬಿ.ಸಿ.ರೋಡ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಲ್ಲಿನ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಶನಿವಾರ ಆರಂಭಗೊಂಡ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇನ್ಸ್ಪೆಕ್ಟರ್ ಅರ್ಚನಾ, ಬ್ಯಾಂಕ್ ಮ್ಯಾನೇಜರ್ ಬೇಬಿ ಕುಂದರ್, ಪುರಸಭಾ ಸದಸ್ಯ ಜಗದೀಶ್ ಕುಂದರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ಕುಲಾಲ್, ಕಾರ್ಯಾಧ್ಯಕ್ಷ ಶ್ರೀಧರ್ ಅಮೀನ್, ಮುಖ್ಯಶಿಕ್ಷಕ ಕುಶಲ ಎ., ಶಿಬಿರ ನಾಯಕ ಮುಖೇಶ್, ನಾಯಕಿ ಸಾಕ್ಷ್ಯ ಮತ್ತಿತರರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಭಾರತಿ ವಸಂತ ಕುಮಾರ್ ಸ್ವಾಗತಿಸಿ, ಉಪನ್ಯಾಸಕ ಪ್ರದೀಪ್ ಪೂಜಾರಿ ವಂದಿಸಿದರು. ಉಪನ್ಯಾಸಕ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *