ಮಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಿಕ್ಷಕರ ಪ್ರತಿನಿಧಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರ ಮನವಿಯ ಮೇರೆಗೆ ದಕ್ಷಿಣ ಕನ್ನಡ, ಉಡುಪಿ, ಹಾಗೂ ಶಿವಮೊಗ್ಗ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳಿಗೆ ಅ.23ರವರೆಗೆ ನೀಡಲಾಗಿದ್ದ ದಸರಾ ರಜೆಯನ್ನು ಅ.25ರವರೆಗೆ ವಿಸ್ತರಣೆ ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರ ಮನವಿಯ ಮೇರೆಗೆ ಪ್ರೌಢಶಾಲೆಗಳಿಗೆ ರಜೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಪ್ರಸ್ತುತ ಪದವಿಪೂರ್ವ ಶಿಕ್ಷಣ ಇಲಾಖೆಗೆ ಈ ಕುರಿತು ಪ್ರತ್ಯೇಕ ಆದೇಶ ಹೊರಡಿಸಿದೆ.

By suddi9

Leave a Reply

Your email address will not be published. Required fields are marked *