ನವದೆಹಲಿ: ಈ ಹಿಂದೆ ನೋಟು ರದ್ಧತಿ ಘೋಷಣೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 14ರ ವರೆಗೂ ಹಳೆಯ ನೋಟುಗಳನ್ನು ಸರ್ಕಾರಿ ಸಂಸ್ಥೆಗಳಲ್ಲಿ ಬಳಕೆ ಮಾಡಬಹುದು ಎಂದು ಹೇಳಿದ್ದರು. ಸರ್ಕಾರಿ ಕಚೇರಿ, ಸರ್ಕಾರಿ ಸಾರಿಗೆ ಸಂಸ್ಥೆ, ಪೆಟ್ರೋಲ್ ಬಂಕ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳ ಚಲಾವಣೆ ಕಾಲಾವಧಿಯನ್ನು ಮತ್ತೆ 10 ದಿನಗಳವರೆಗೆ ವಿಸ್ತರಿಸಿ ಅಂದರೆ ನವೆಂಬರ್ 24ರವರೆಗೂ ವಿಸ್ತರಿಸಿ ಈ ಕಾಲಾವಧಿಯನ್ನು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
