ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ವಾರ್ಷಿಕ ವಿಶೇಷ ಶಿಬಿರವು ಇದೇ 20ರಿಂದ 26ರ ತನಕ ನಡೆಯಲಿದೆ.
20ರಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಬಿರ ಉದ್ಘಾಟಿಸಲಿದ್ದು, ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉಪಪ್ರಾಂಶುಪಾಲ ಪ್ರೊ.ಕೆ.ತುಕಾರಾಮ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಮತ್ತಿತರ ಗಣ್ಯರು ಭಾಗವಹಿಸುವರು.
26ರಂದು ಬೆಳಿಗ್ಗೆ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಪ್ರೇಮನಾಥ ಪೈ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಮತ್ತಿತರರು ಭಾಗವಹಿಸುವರು ಎಂದು ಶಾಲಾ ಮುಖ್ಯಶಿಕ್ಷಕ ಜಯರಾಮ ಪಡ್ರೆ ತಿಳಿಸಿದ್ದಾರೆ.
