ಮಂಗಳೂರು: ಮಂಗಳೂರು ತಾಲೂಕಿನ ಬಜಪೆ ಗ್ರಾಮದ ಪೆರ್ಮುದೆ ಎಂಬಲ್ಲಿ ಸೋಮವಾರ ಬೆಳಗ್ಗೆ ತಾಯಿ ಮಗ ಮತ್ತು ಮಗಳು ಆತ್ಮಹತ್ಯೆ ಮಾಡಲು ಯತ್ನಿಸಿ ಮಗ ನೇಣು ಬಿಗಿದು ಹತ್ಮಹತ್ಯ ಮಾಡಿಕೊಂಡರೆ ತಾಯಿ ಮಗಳು ಇಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ತಾಯಿ ಮತ್ತು ಮಗ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಮಗಳು ಪ್ರಾಣಾಪಯದಿಂದ ಪಾರಾಗಿದ್ದಾಳೆ. ಈ ಸಾಮೂಹಿಕ ಆತ್ಮಹತ್ಯೆಗೆ ಸಂಬಂಧಿಸಿದಂತೆ ತನ್ನ ಮನೆಯ ಗೋಡೆಯ ಮೇಲೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ನಡೆದಿದೆ ಎನ್ನಲಾಗಿದ್ದು ಬಜಪೆ ಪೋಲಿಸರು ತನಿಕೆ ನಡೆಸುತ್ತಿದ್ದಾರೆ.
