ಮೂಡುಬಿದಿರೆ : ಪರಸ್ಪರ ಒಟ್ಟುಗೂಡುವಿಕೆಯಿಂದ ಸರ್ವರಿಗೂ ಒಳಿತ್ತನ್ನುಂಟು ಮಾಡುವುದೇ ಸಹಕಾರದ ಧ್ಯೇಯವಾಗಿರುತ್ತದೆ. ಸಹಕಾರಿ ಸಂಸ್ಥೆಯೊಂದು ಕೇವಲ ಹಣಕಾಸಿನ ವ್ಯವಹಾರಕ್ಕಷ್ಟೇ ತನ್ನನ್ನು ಸೀಮಿತಗೊಳಿಸದೆ ಸ್ವ-ಸಹಾಯ ಸಂಘಗಳ ಮೂಲಕ ಸಂಸ್ಕೃತಿಯನ್ನು ಉಳಿಸುವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲ ಪ್ರೊ. ಚಂದ್ರಶೇಖರ ದೀಕ್ಷಿತ್ ಹೇಳಿದರು.
ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ವಂದೇ ಮಾತರಂ ವಿವಿದೋದ್ಧೇಶ ಸೌಹಾರ್ದ ಸಹಕಾರಿ (ನಿ) ಪ್ರವರ್ತಿತ ಸ್ವ-ಸಹಾಯ ಸಂಘಗಳ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಆಳ್ವಾಸ್ ಸಮಾಜಕಾರ್ಯ ಕಾಲೇಜಿನ ಉಪನ್ಯಾಸಕಿ ಡಾ.ಮಧುಮಾಲ “ಇಂದಿನ ಕುಟುಂಬ ವ್ಯವಸ್ಥೆ ಮತ್ತು ಮೌಲ್ಯಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಬ್ಯಾಂಕಿನ ಅಧ್ಯಕ್ಷ ಪ್ರೊ.ಎಂ.ವಾಸುದೇವ ಭಟ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸ್ವಸಹಾಯ ಸಂಘಗಳ ಮೇಲ್ವೀಚಾರಕ ಅಶೋಕ್ ವಾರ್ಷಿಕ ವರದಿಯನ್ನು ಮಂಡಿಸಿದರು.
ಉದ್ಘಾಟನೆಗೆ ಮೊದಲು ಹೊಸಬೆಟ್ಟಿನ ಆಂಜನೇಯ ಸ್ವಸಹಾಯ ಸಂಘದ ಸದಸ್ಯರಿಂದ ಭಜನೆ ಕಾರ್ಯಕ್ರಮ ನಂತರ ಸ್ವಸಹಾಯ ಸಂಘಗಳ ಸದಸ್ಯರಿಗಾಗಿ ವಿವಿಧ ಸ್ಪರ್ಧೆಗಳು ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಇದರ ವತಿಯಿಂದ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಭಿರ ನಡೆಯಿತು.

ಇರ್ವತ್ತೂರಿನ ಸಾವಯವ ಕೃಷಿಕ ಅನಂತ ಭಟ್ ಔಷಧೀಯ ಸಸ್ಯಗಳ ಗುರುತಿಸುವಿಕೆಯಲ್ಲಿ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ಕಾಲೇಜಿನ ಉಪನ್ಯಾಸಕ ಗೋಪಿನಾಥ್ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಡಾ.ಮಧುಮಾಲ, ಗೋಪಾಲಕೃಷ್ಣ ಭಟ್, ಭರತ್ ನಾೈಕ್, ಡಾ.ಕೇಶವ ಹೆಗ್ಡೆ ಹಾಗೂ ವಸಂತಿ ಜಿ.ಕೆ.ಭಟ್ ತೀರ್ಪುಗಾರರಾಗಿ ಸಹಕರಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ನ ಅಧ್ಯಕ್ಷ ರಾಜೇಶ್ ಬಂಗೇರಾ ಸ್ಪರ್ಧಾ ವಿಜೇತರುಗಳಿಗೆ ಬಹುಮಾನವನ್ನು ವಿತರಿಸಿದರು. ವೆಂಕಟರಮಣ ಕೆರೆಗದ್ದೆ, ಕೃಷ್ಣಮೂರ್ತಿ ಮತ್ತು ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ಯಾಮ ಹೆಗ್ಡೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕರ ವಂದಿಸಿದರು.
