ಮೂಡುಬಿದಿರೆ: ಕಲ್ಲಬೆಟ್ಟುವಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ 49ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಯಿತು.

mbd-13

ಅಲಂಗಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಈಶ್ವರ ಭಟ್ ಧಾರ್ಮಿಕ ಉಪನ್ಯಾಸ ನೀಡಿ, ದೇವರನ್ನು ಭಕ್ತಿಯಿಂದ ಆರಾಧನೆ ಮಾಡಿದರೆ ನೆಮ್ಮದಿಯ ಜೀವನ ನಮ್ಮದಾಗುತ್ತದೆ. ಶ್ರೀ ಸತ್ಯನಾರಾಯಣ ಆರಾಧüನೆಯಿಂದ ಪುಣ್ಯ ಪ್ರಾಪ್ತಿಯಾಗುವುದು ಎಂದು ಎಂದು ತಿಳಿಸಿದರು.

ಸಮಿತಿಯ ಅಧ್ಯಕ್ಷ, ರಾಷ್ಟ್ರಮಟ್ಟದ ಭಾರತ್ ಜ್ಯೋತಿ ಪ್ರಶಸ್ತಿ ಪರಸ್ಕøತ ಎಂ. ಬಾಹುಬಲಿ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಉದ್ಯಮಿ ಪ್ರಸಾದ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆವಹಿಸಿದ್ದರು.

ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಸಮಿತಿಯ ಕಾರ್ಯದರ್ಶಿ ರಮೇಶ ಚಂದ್ರ, ಪ್ರದೀಪ್ ರೈ, ಕರುಣಾಕರ ಶೆಟ್ಟಿ, ಮಂಜುನಾಥ ಪೈ, ಸಂಚಾಲಕ ಕೆ. ಸುಂದರ ಶೆಟ್ಟಿ ಉಪಸ್ಥಿತರಿದ್ದರು.  ಶ್ರೇಯಾ ಶೆಟ್ಟಿ ಅಭಿನಂದನಾ ಪತ್ರವನ್ನು ವಾಚಿಸಿದರು. ಶ್ವೇತಾ ಎಂ. ಪೈ ಇವರಿಂದ ಸಂದೇಶ ವಾಚಿಸಿದರು. ಕಾರ್ಯದರ್ಶಿ ಪಿ. ರಮೇಶ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಪೈ ವಂದಿಸಿದರು.  ಸುಂಕದಕಟ್ಟೆ ಯಕ್ಷಗಾನ ಮಂಡಳಿಯವರಿಂದ ಮಂಚದ ಮಹಿಷಾಂದಾಯೆ ತುಳು ಯಕ್ಷಗಾನ ಬಯಲಾಟ ನಡೆಯಿತು.

By suddi9

Leave a Reply

Your email address will not be published. Required fields are marked *