ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆಯಲ್ಲಿ ಬುಧವಾರ ಬೆಳಿಗ್ಗೆ ಕಾರೊಂದು ಅಗ್ನಿಗೆ ಆಹುತಿಯಾಗಿದೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಎಂಬವರು ಸಂಪಿಗೆಯಲ್ಲಿರುವ ಮನೆಯಿಂದ ಕಾಲೇಜಿಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಸಂಪೂರ್ಣ ಕಾರನ್ನು ಆವರಿಸಿ ಭಸ್ಮವಾಗಿದೆ. ಮೂಡುಬಿದಿರೆ ಅಗ್ನಿಶಾಮಕದಳದವರು ಬಂದು ಬೆಂಕಿ ನಂದಿಸಿದ್ದಾರೆ.

