ಬಂಟ್ವಾಳ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣಾ ಪ್ರಚಾರದ ಕಾರ್ಯಕರ್ತರ ಸಭೆಯು ಮೆಲ್ಕಾರ್ ಬಿರ್ವ ಸೆಂಟರ್ ನ ಸಭಾಂಗಣದಲ್ಲಿ ಜರಗಿತು. ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ.ಸದಸ್ಯ ಸಂಜೀವ ಪೂಜಾರಿ , ಎಪಿಎಂಸಿ ಅಭ್ಯರ್ಥಿ ಪದ್ಮನಾಭ ರೈ ಉಪಸ್ಥಿತರಿದ್ದರು.
