ಬಂಟ್ವಾಳ: ತಾಲ್ಲೂಕಿನ ಸಜಿಪ ಮಾಗಣೆ 1ನೇ ಕಾಂತಾಡಿಗುತ್ತು ಬರಂಗರೆ ಶೀನ ಹೆಗ್ಡೆ ಯಾನೆ ದೇವು ಶೆಟ್ಟಿ (91) ಇವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಇದ್ದಾರೆ.
ಸ್ವಾತಂತ್ರ್ಯಾ ನಂತರದಲ್ಲಿ ಬಂಟ್ವಾಳ ಕಾಂಗ್ರೆಸ್ ಮಂಡಲ ಅಧ್ಯಕ್ಷರಾಗಿ ದುಡಿದಿದ್ದ ಇವರು ಕಳೆದ 14 ವರ್ಷಗಳಿಂದ ಸಜಿಪ ಮಾಗಣೆ ಮುಖ್ಯಸ್ಥರಾಗಿ ಗಡಿಹಿಡಿದ ಧಾರ್ಮಿಕ ನೇತಾರನಾಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಮಾಜಿ ಅಧ್ಯಕ್ಷ ಬರಂಗರೆ ಸದಾನಂದ ಪೂಂಜ, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು ಮತ್ತಿತರರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
