ಬಂಟ್ವಾಳ: ಸ್ವಾಮೀ ವಿವೇಕಾನಂದರ 154ನೆ ಜನ್ಮ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕಿನ ವಿವೇಕಾನಂದ ಸಪ್ತಾಹವನ್ನು ಇಂದು (ಜ. 12) ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.

download

ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಪದವಿ ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜ. 13ರಂದು ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾಷಣ ಸ್ಪರ್ಧೆ (ವಿಷಯ: ಸಾರ್ವತ್ರಿಕ ಸಾಕ್ಷರತೆಯಲ್ಲಿ ಯುವ ಜನತೆಯ ಪಾತ್ರ), ಕನ್ಯಾನ ಸರಕಾರಿ ಪದವಿ ಕಾಲೇಜಿನಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ, ಜ. 16ರಂದು ಸಿದ್ಧಕಟ್ಟೆ ಪದವಿ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ (ವಿಷಯ: ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ), ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ವಿವೇಕಾನಂದರ ಪೆನ್ಸಿಲ್ ಸ್ಕೆಚ್ ಚಿತ್ರ ಸ್ಪರ್ಧೆ, ಜ. 17ರಂದು ಸರಕಾರಿ ಪದವಿ ಕಾಲೇಜು ಮುಡಿಪುವಿನಲ್ಲಿ ರಸ ಪ್ರಶ್ನೆ ಸ್ಪರ್ಧೆ, ಎಸ್‍ವಿಎಸ್ ಬಂಟ್ವಾಳ ಕಾಲೇಜಿನಲ್ಲಿ ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಆಯಾಯ ಕಾಲೇಜಿನಲ್ಲಿ ಬೆಳಗ್ಗೆ 11 ಗಂಟೆಗೆ ಸ್ಪರ್ಧೆ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *