ಬಂಟ್ವಾಳ ತಾಲ್ಲೂಕಿನ ನಯನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ದೈಹಿಕ ಶಿಕ್ಷಣ ಶಿಕ್ಷಕ ಎಂ.ವಾಸು ಇವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ಅಶೋಕ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಪೂಜಾರಿ, ಉದ್ಯಮಿ ಹರೀಂದ್ರ ಪೈ, ಪ್ರಮುಖರಾದ ಹರೀಶ ಶೆಟ್ಟಿ, ಉಮೇಶ ಆಚಾರ್ಯ, ಮಿಥುನ್ ಪ್ರಭು ಸಹಿತ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
