ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯ ಪ್ರಾಚೀನ ಗುರುಗಳ ಬಸದಿಯ ವಾರ್ಷಿಕ ಉತ್ಸವವವು ಮೂಡುಬಿದಿರೆ ಜೈನಮಠದ ಮಠಾಧೀಶ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಾ.10ರಂದು ನಡೆಯಲಿದೆ ಎಂದು ಮೂಡುಬಿದಿರೆ ಜೈನಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್ ಶೆಟ್ಟಿ, ಬಸದಿಗಳ ಮೊಕ್ತೇಸರ ಪಟ್ಣಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್ ತಿಳಿಸಿದ್ದಾರೆ.