ಬಂಟ್ವಾಳ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದರಿಂದ ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಫ್.ಉಮರ್ ಫಾರೂಕ್, ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಕಾಂಗ್ರೆಸ್ ಸರಕಾರದ ಜನಪರ ಆಡಳಿಕ್ಕೆ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಯ ಫಲಿತಾಂಶ ಕೈಗನ್ನಡಿಯಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲೋ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.ಈ ಸಂದರ್ಭದಲ್ಲಿ ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಹಮ್ಮದ್ ಹಾಶೀರ್, ಸದಸ್ಯ ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.