ಬಂಟ್ವಾಳ: ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಕುಕ್ಕಾಜೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವವು ಇಂದಿನಿಂದ ಮೂರು ದಿನಗಳ ಕಾಲ ನೂಜಿಬೈಲು ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಎ.14 ರಂದು ಸಂಜೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನಾಟಕೋಸವ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ಕೆ.ಎ.ದಯಾನಂದ, ಕರ್ಣಾಟಕ ಬ್ಯಾಂಕ್ ಮುಖ್ಯಪ್ರಬಂಧಕ ಶ್ರೀನಿವಾಸ ದೇಶಪಾಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಸುವರ್ಣ ಪ್ರತಿಷ್ಠಾನ ಮಂಗಳೂರು ಇವರಿಂದ ಸದಾನಂದ ಸುವರ್ಣ ನಿರ್ದೇಶನದ “ಉರುಳು” ನಾಟಕ ಪ್ರದರ್ಶನಗೊಳ್ಳಲಿದೆ. 15 ರಂದು ಸುಮನಸ ಕೊಡವೂರು ತಂಡದಿಂದ ವಿದ್ದು ಉಚ್ಚಿಲ ನಿರ್ದೇಶನದ ಮುದ್ರಾರಾಕ್ಷಸ ನಾಟಕ ಪ್ರದರ್ಶನಗೊಳ್ಳಲಿದೆ ಹಾಗೂ 16 ರಂದು ಸಮಾರೋಪ ಸಮಾರಂಭದಲ್ಲಿ ರಂಗನಿರ್ದೇಶಕ ಪ್ರಸಾದ ರಕ್ಷಿದಿ, ಬಂಟ್ವಾಳ ಕ.ಸಾ.ಪ ಅಧ್ಯಕ್ಷ ಕೆ.ಮೋಹನ ರಾವ್, ನೂಜಿಬೈಲು ಶಾಲಾ ಸಂಚಾಲಕ ಶಾಂತಲಾ ಎನ್.ಭಟ್, ಕೊಳ್ನಾದು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಸಕಲೇಶಪುರ ಬೆಳ್ಳೆಕೆರೆಯ ಜೂ ಕರ್ನಾಟಕ ಸಂಘ ಕಲಾವಿದರಿಂದ ಕೆ.ಸಿ.ಕುಮಾರ್ ನಿರ್ದೇಶ ದ ಬಹುಮಾನ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ತಿಳಿಸಿದ್ದಾರೆ.