ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ದಿಢೀರ್ ಪ್ರತಿಭಟನೆ
ಬಂಟ್ವಾಳ:ಇಲ್ಲಿನ ಮೂಡನಡುಗೋಡು ಗ್ರಾಮದ ದಡ್ಡಲಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವರ್ಷ ಆರಂಭಗೊಂಡ ಎಲ್‍ಕೆಜಿ, ಯುಕೆಜಿ ಸೇರಿದಂತೆ ಒಂದರಿಂದ ಐದನೇ ತರಗತಿ ತನಕ ಆಂಗ್ಲ ಭಾಷೆ ಶಿಕ್ಷಣವನ್ನು ಯಥಾ ಸ್ಥಿತಿ ಮುಂದುವರಿಸಲು ಹೈಕೋರ್ಟ್ ಆದೇಶಿಸಿದ್ದರೂ ಈ ಬಾರಿ ಮಕ್ಕಳಿಗೆ ಪಠ್ಯ ಪುಸ್ತಕ ನೀಡದೆ ಇಲಾಖಾ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಬಿ.ಸಿ.ರೋಡ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಸೋಮವಾರ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಇದರಿಂದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೈಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ದಡ್ಡಲಕಾಡು ಸರ್ಕಾರಿ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಆರೋಪಿಸಿದೆ. ಸೋಮವಾರ ಮಧ್ಯಾಹ್ನ ಆರಂಭಗೊಂಡ ಪ್ರತಿಭಟನೆ ಸಂಜೆ ತನಕ ಮುಂದುವರಿದು ಬಳಿಕ ಮಕ್ಕಳ ಪೊಷಕರು ಮತ್ತು ವಿದ್ಯಾರ್ಥಿಗಳು ಕೂಡಾ ಪಾಲ್ಗೊಂಡರು.

5btl-Protest
ಈ ಪಠ್ಯ ಪುಸ್ತಕ ನೀಡಲು ನಿರಾಕರಣೆ ಬಗ್ಗೆ ಲಿಖಿತ ಸ್ಪಷ್ಟನೆ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದರಲ್ಲಿ ‘ರಾಜಕೀಯ’ ಅಡಗಿದೆ ಎಂದು ಪ್ರತಿಭಟನಾಕಾರರು ಆಕೋಶ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಪ್ರಕಾಶ್ ಅಂಚನ್, ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ನಗರ ಠಾಣಾಧಿಕಾರಿ ರಕ್ಷಿತ್ ಎ.ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ರಾಮಚಂದ್ರ ಕರೆಂಕಿ, ಪೂವಪ್ಪ ಮೆಂಡನ್, ಪುರುಷೋತ್ತಮ ಅಂಚನ್, ನಂದರಾಮ್ ರೈ, ರಮಾನಾಥ ರಾಯಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *