ಬಂಟ್ವಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಮೊಗರು , ದಂಡೆಗೋಳಿ ನಲ್ಲಿ ಸ್ಥಳೀಯ ದಾನಿಗಳಾದ ಪದ್ಮನಾಭ ನಾಯ್ಕ ಒಡಲ್ ಪಲ್ಕೆ ರವರು ಪ್ರಸಕ್ತ ಸಾಲಿನಲ್ಲಿ ಕಲಿಯುತ್ತಿರುವ ಒಂದರಿಂದ ಏಳನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಮತ್ತು ಕಳೆದ ವರ್ಷ ಅತೀ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು ಹಾಗು ಅದ್ಯಾಪಕ ವೃಂದ ಉಪಸ್ಥಿತರಿದ್ದರು.
