ಶ್ರೀ ಲಕ್ಷ್ಮಿನರಸಿಂಹ ಕ್ಷೇತ್ರ ಇರಂದೂರು ಇದರ ಜೀರ್ಣೋದ್ಧಾರದ ಪ್ರಯುಕ್ತ ದೈವಜ್ಷರ ಅಪ್ಪನೆಯಂತೆ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪ್ರತಿ ತಿಂಗಳು ದುರ್ಗಾ ಪೂಜುಯು ನಡೆಯುತ್ತಿದ್ದು, ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಕ್ಷೇತ್ರಕ್ಕೆ ವಾಸ್ತು ಶಿಲ್ಪಿ ರಮೇಶ್ ಕಾರಂತ ಬೆದ್ರಡ್ಕ ರವರು ಬೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾಶಿವ ಆಚಾರ್ಯ ಕೈಂತಿಲ, ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಊರಿಬ ಭಕ್ತಾಧಿಗಳು ಉಪಸ್ಥಿತರಿದ್ದರು.
