ಕೈಕಂಬ: ಇತ್ತೀಚೆಗೆ ವಜ್ರಮಹೋತ್ಸವ ಆಚರಿಸಿದ ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಸಂಸ್ಠೆಗಳಲ್ಲಿ ಒಂದಾದ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿ ಬರ ಪರಿಹಾರ ನಿಧಿಗೆ 10 ಲಕ್ಷ ರೂ ದೇಣಿಗೆಯನ್ನು ನೀಡಲಾಗಿದೆ.ಬೆಂಗಳೂರಿನಲ್ಲಿ ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಅವರು ದೇಣಿಗೆ ಚೆಕ್ಕನ್ನು ಹಸ್ತಾಂತರಿಸಿದರು.ಬ್ಯಾಂಕಿನ ಸೇವಾ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳಯ ಶ್ಲಾಘನೆ ವ್ಯಕ್ತಪಡಿಸಿದರು.
ಸಚಿವರಾದ ಬಿ.ರಮಾನಾಥ ರೈ, ಯು.ಟಿ ಖಾದರ್, ಶಾಸಕರುಗಳಾದ ಕೆ ಅಭಯಚಂದ್ರ ಜೈನ್, ಬಿ.ಎ ಮೋಹಿಯುದ್ದೀನ್ ಬಾವಾ ವಿಧಾನಪರಿಷತ್ ಮುಖ್ಯ ಸಚೇತಕರಾದ ಐವನ್ ಡಿ ಸೋಜಾ ಮುಂತಾದವರು ಉಪಸ್ಥಿತರಿದ್ದರು.